ಕುಂದಾಪುರದ ಚಿನ್ಮಯ್ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ.!

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಹಿರಿಯ ಉದ್ಯಮಿ ಚಿನ್ಮಯಿ ಆಸ್ಪತ್ರೆಯ ಮಾಲಕ ಕಟ್ಟೆ ಭೋಜಣ್ಣ (80.) ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್‌ನಲ್ಲಿ ರಿವಾಲ್ವರ್‌ನಲ್ಲಿ ಗುಂಡು ಹಾರಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕೋಟೇಶ್ವರ ಬಳಿ ಗುರುವಾರ ಬೆಳಗ್ಗೆ 6.15ರ ಸುಮಾರಿಗೆ ಆದರೆ ಆತ್ಮಹತ್ಯೆ ಮಾಡಿಕೊಂಡವರು ಬೇರೆಯವರ ಮನೆಯ ಸಿಟೌಟ್‌ನಲ್ಲಿ ಕುಳಿತು ಗುಂಡು ಹಾರಿಸುವುದು ಏಕೆ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕೋಟ್ಯಾಧಿಪತಿಯಾಗಿರುವ ಕಟ್ಟೆ ಭೋಜಣ್ಣ ಬೆಂಗಳೂರಿನಲ್ಲಿ ಹಲವು ಹೋಟೆಲ್, ಬಟ್ಟೆ ಅಂಗಡಿಗಳನ್ನು ನಡೆಸುತ್ತಿದ್ದರು. ಕುಂದಾಪುರದ ಚಿನ್ಮಯಿ ಆಸ್ಪತ್ರೆ, ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿಯೇ ಪ್ರಸಿದ್ಧಿ ಪಡೆದಿದೆ.ಜಮೀನು ಮತ್ತು ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ. ಶಿಸ್ತಿಗೆ ಹೆಸರಾಗಿದ್ದ ಕಟ್ಟೆ ಭೋಜಣ್ಣ ಅವರಿಗೆ ಪತ್ನಿ ಭಾಗೀರಥಿ, ಸುಧಿ, ಗುಂಡ ಮತ್ತು ಸುಮಾ ಪುತ್ರನ್ (ಡಾ. ಉಮೇಶ್ ಅವರ ಪುತ್ರ ಪತ್ನಿಯನ್ನು ಅಗಲಿದ್ದಾರೆ) ಇದ್ದಾರೆ. ಕುಂದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.