ಕರಾವಳಿ
ಉದ್ಯಮಿ ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ : ಖ್ಯಾತ ಉದ್ಯಮಿ ಮೊಳಹಳ್ಳಿ ಗಣೇಶ್ ಶೆಟ್ಟಿ ಬಂಧನ

ಕುಂದಾಪುರ: ಉಡುಪಿ ಜಿಲ್ಲೆಯ ಕೋಟೇಶ್ವರದ ಅಂಕದಕಟ್ಟೆ ಎಂಬಲ್ಲಿ ಗುರುವಾರ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಉದ್ಯಮಿ ಮೊಳಹಳ್ಳಿ ಗಣೇಶ ಶೆಟ್ಟಿಯವರನ್ನು ಪೊಲೀಸರು ಶುಕ್ರವಾರ ರಾತ್ರಿ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ
ಮೃತರ ಪುತ್ರ ಸುಧೀಂದ್ರ ಕಟ್ಟೆ ತಂದೆಯ ಸಾವಿಗೆ ಮೊಳಹಳ್ಳಿ ಗಣೇಶ ಶೆಟ್ಟಿ ಮತ್ತು ಬ್ರೊಕರ್ ಇಸ್ಮಾಯಿಲ್ ಅವರ ಪ್ರಚೋದನೆಯೇ ಕಾರಣ ಎಂದು ದೂರು ನೀಡಿದ್ದು ಸೆಕ್ಷನ್ 306 ಪ್ರಕಾರ ಪ್ರಕರಣ ದಾಖಲಾಗಿತ್ತು. ಪ್ರಕರಣ ಅರೋಪಿಗಳ ಪ್ಯೆಕಿ ಗಣೇಶ ಶೆಟ್ಟಿ ಬಂಧಿಸಲ್ಪಟ್ಟಿದ್ದು ಇನ್ನು ಇಸ್ಮಾಯಿಲ್ ಬಂಧನಕ್ಕೆ ಪೊಲೀಸರು ಬಲೆಬೀಸಿದ್ದಾರೆ.
ಬಂಧಿತ ಆರೋಪಿಯನ್ನು ಶುಕ್ರವಾರ ರಾತ್ರಿ ಮ್ಯಾಜಿಸ್ಟ್ರೇಟ್ ಮನೆ ಮುಂದೆ ಹಾಜರುಪಡಿಸಲಾಗಿದ್ದು ಮೇ 30 ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವಶ್ಯವಿದ್ದಲ್ಲಿ ವ್ಯೆದ್ಯಕೀಯ ಚಿಕಿತ್ಸೆಗೆ ಒಳಪಡಿಸಬಹುದು ಎಂದು ಅದೇಶಿಸಿದೆ.
ಪೊಲೀಸರು ಬಂಧಿತ ಆರೋಪಿಯ ವಿಚಾರಣೆ ನಡೆಸಿದ್ದಾರೆ. ಇನ್ನೊಬ್ಬ ಆರೋಪಿಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.