ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ – ಧರ್ಮ ವೇದಿಕೆ
ಜೀರ್ಣೋದ್ಧಾರಗೊಂಡಿರುವ ಉಡುಪಿ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಹಿತ ಧಾರ್ಮಿಕ ಕಾರ್ಯಕ್ರಮಗಳು ದಿನಾಂಕ 01-06-2022 ರಿಂದ ಆರಂಭಗೊಂಡಿದ್ದು ಇಂದು ದಿನಾಂಕ 03-06-2022 ರಂದು ನಡೆದ ಧರ್ಮ ಸಭೆಯಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಇತ್ತೀಚೆಗೆ ಕಾತ್ಯಾಯಿನಿ ಕಲ್ಯಾಣ ಮಂಟಪ ಹಾಗೂ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನಡುವೆ ಸುಮಾರು 50 ವರ್ಷಗಳಿಂದ ಇದ್ದ ವಿವಾದ ಬಗೆಹರಿಸಲಾಗಿದ್ದು ಅದರಂತೆ ಕಾತ್ಯಾಯಿನಿ ಕಲ್ಯಾಣ ಮಂಟಪದ ಬೀಗದ ಕೈಯನ್ನು ಸರ್ವಮಂಗಳ ಟ್ರಸ್ಟಿನ ಮುರುಳಿ ಕೃಷ್ಣ ಉಪಾಧ್ಯ ಹಾಗೂ ರಾಮಚಂದ್ರ ಅಡಿಗ ಅವರು ಪೇಜಾವರ ಮಠದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಹಾಗೂ ವಿಧಾನಸಭೆಯ ಸಭಾಪತಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸಮ್ಮುಖದಲ್ಲಿ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಉಡುಪಿ ನಗರ ಸಭೆಯ ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಡಾl ಸೊಂದ ಭಾಸ್ಕರ್ ಭಟ್ ಕಟೀಲು, ನಗರಸಭಾ ಸದಸ್ಯರಾದ ಗೀತಾ ಶೇಟ್, ಗಿರೀಶ್ ಅಂಚನ್, ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕೆ. ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು.