ತಾಜಾ ಸುದ್ದಿಗಳುವಿಶೇಷ ಲೇಖನಗಳು

ಜೂನ್ 6 – ಮಣಿಪಾಲದಲ್ಲಿ ನೇರ ಸಂದರ್ಶನ

ಉಡುಪಿ: ಟೆಸ್ಟಾ ಪ್ರೀಂಟ್ಸ್ ಪೈಲಿ ಮತ್ತು ಓಮ್ಮಿಯನ್
ಪ್ರೀಮಿಡಿಯಂ ಪ್ರೈ ಲಿ, ರಿಲಯನ್ಸ್ ಜಿಯೋ ಇನ್ಫೋಕಾಮ್ ಪೈಲಿ, ಪ್ರಕಾಶ ರಿಟೈಲ್ ಪೈಲಿ ಹಾಗೂ ಮೇಡ್ ಪ್ಲಾಸ್ ಫೈಲಿ
ವತಿಯಿಂದ ಜೂನ್ 6 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ, ಬಿ.ಸಿ.ಎ, ಬಿ.ಸಿ.ಎಸ್,
ಎಮ್.ಸಿ.ಎ, ಬಿ.ಕಾಂ ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಬಿ.ಇ ಇಂಜಿನಿಯರಿಂಗ್ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಗ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ
ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ರಜತಾದ್ರಿ, ಮಣಿಪಾಲ, ಮೊ.ಸಂಖ್ಯೆ: 8105618291, 8197440155 ಹಾಗೂ 9945856670 ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
error: Content is protected !!