ರಾಷ್ಟ್ರೀಯ
ಇಂದಿನ ಕೊರೊನಾ ಪ್ರಕರಣ ವಿವರ
ದೆಹಲಿ : ದೇಶದಲ್ಲಿ ಸತತ ಎರಡನೇ ದಿನವೂ 7000 ಹೊಸ
ಕೋವಿಡ್ ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7584 ಹೊಸ ಪ್ರಕರಣವು ವರದಿಯಾಗಿದೆ. ದೇಶದಲ್ಲಿ ಪ್ರಸ್ತುತ 36,267 ಸಕ್ರಿಯ ಪ್ರಕರಣಗಳು ಇವೆ. ಕಳೆದ 24 ಗಂಟೆಗಳಲ್ಲಿ 24 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್ ಸಾವಿನ ಸಂಖ್ಯೆ 5,24,747ಕ್ಕೆ ಏರಿಕೆಯಾಗಿದೆ.