ವಿಶೇಷ ಲೇಖನಗಳು

ಪಡಿತರ ಚೀಟಿಗೆ ಇ-ಕೆವೈಸಿ ನಿಯಮ ಸಡಿಲಿಕೆ

ಉಡುಪಿ: ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರಿಗೆ ಪೋರ್ಟಿಬಿಲಿಟಿ ಮೂಲಕ ಜೂನ್
30 ರ ಒಳಗೆ ಇ-ಕೆವೈಸಿ ಮಾಡಿಸಲು ಅಂತಿಮ ಅವಕಾಶ ಕಲ್ಪಿಸಲಾಗಿದೆ.

ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಈವರೆಗೆ ಪಡಿತರ ಆಹಾರಧಾನ್ಯ ಪಡೆಯುತ್ತಿದ್ದ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಇದ್ದ ನಿಯಮವನ್ನು ಸಡಿಲಗೊಳಿಸಲಾಗಿದ್ದು, ಇದುವರೆಗೂ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಬೆರಳಚ್ಚು ನೊಂದಾಯಿಸಿಕೊಳ್ಳಬಹುದಾಗಿದೆ (ಆಧಾರ ದೃಢೀಕರಣ ಇ- ಕೆವೈಸಿ).

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಪಡಿತರ
ಚೀಟಿದಾರರು ಜಾತಿ ಪ್ರಮಾಣ ಪತ್ರ ಹಾಗೂ ಅನಿಲ ಸಂಪರ್ಕ ಹೊಂದಿರುವ ಪಡಿತರ ಚೀಟಿದಾರರು, ಅನಿಲ ಸಂಪರ್ಕದ ಮಾಹಿತಿ ಮತ್ತು ಮೊಬೈಲ್ ಸಂಖ್ಯೆಯನ್ನು ಇ-ಕೆವೈಸಿ ಮಾಡುವ ನ್ಯಾಯಬೆಲೆ ಅಂಗಡಿಗಳಿಗೆ ನೀಡಬೇಕು.

ಸರಕಾರದ ಆದೇಶದಂತೆ ಜೂನ್ 30 ರ ಒಳಗೆ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರನ್ನು ರದ್ದು ಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ
ಮತ್ತು ನಾಗರಿಕ ಸರಬರಾಜು ಇಲಾಖೆಯ
ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!