ಕರಾವಳಿ
ಅಜ್ಜರಕಾಡು ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ “ಪ್ರತಿಭಾ ದಿನಾಚರಣೆ”

ಡಾ.ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು ಉಡುಪಿ ಇದರ “ಪ್ರತಿಭಾ ದಿನಾಚರಣೆ” ಕಾರ್ಯಕ್ರಮ ದಿನಾಂಕ 10-06-2022 ರಿಂದ 11-06-2022 ರ ವರೆಗೆ 2 ದಿನಗಳ ಕಾಲ ಅಜ್ಜರಕಾಡು ಪುರಭವನದಲ್ಲಿ ನಡೆಯುತ್ತಿದ್ದು, ಇಂದು ದಿನಾಂಕ 11-06-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಮಹಾಪೋಷಕರು, ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್, ಉಡುಪಿ ಪ್ರವರ್ತಕರಾದ ನಾಡೋಜ ಡಾ. ಜಿ ಶಂಕರ್, ಕಾಲೇಜು ಪ್ರಾಂಶುಪಾಲರಾದ ಬಾಲಕೃಷ್ಣ ಶೆಟ್ಟಿ ಮತ್ತು ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.