ರಾಜ್ಯ
ಟಿಪ್ಪು ಸುಲ್ತಾನ್ ಪಠ್ಯ ತೆಗೆದಿದ್ದು ಕಾಂಗ್ರೆಸ್‌ಗೆ ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ’ – ಸಚಿವ ಬಿ.ಸಿ ನಾಗೇಶ್
ಹಾಸನ : ಟಿಪ್ಪು ಸುಲ್ತಾನ್ ಪಠ್ಯ ತೆಗೆದಿದ್ದು ಕಾಂಗ್ರೆಸ್‌ಗೆ ಅರಗಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿ ಪಠ್ಯ ಪುಸ್ತಕ ವಿವಾದವನ್ನು ತೆಗೆದಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗೂರು ರಾಮಚಂದ್ರಪ್ಪ ಪಠ್ಯಪುಸ್ತಕ ಪರಿಷ್ಕರಣೆ ಸಮಯದಲ್ಲಿ ಉನ್ನೀಕೃಷ್ಣನ್, ಮೈಸೂರು ಮಹಾರಾಜರು, ಕೆಂಪೇಗೌಡರು,ಕುವೆಂಪು ಅಧ್ಯಾಯ ತೆಗೆದಿದ್ದಾರೆ. ಇದಕ್ಕೆ ಕಾಂಗ್ರೆಸ್ ನಲ್ಲಿ ಉತ್ತರವಿಲ್ಲ. ಆದರೆ ಕಾಂಗ್ರೆಸ್ ಗೆ ಟಿಪ್ಪು ಸುಲ್ತಾನ್ ಪಠ್ಯ ತೆಗೆದಿದ್ದು ಅರಗಿಸಿಕೊಳ್ಳಲು ಸಾಧ್ಯವಾಗದಿರುವುದಕ್ಕೆ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಹಿಂದೂ ಸಮಾಜವನ್ನು ಒಡೆಯಲು ಪ್ರತಿಪಕ್ಷದವರು ಪಠ್ಯ ಪರಿಷ್ಕರಣೆ ವಿಚಾರ ಕೈಗೆತ್ತಿಕೊಂಡಿದ್ದಾರೆ ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಮುಗಿದಿದೆ ಎಂದು ಹೇಳಿದ್ದಾರೆ.