ನೇತ್ರ ಉಚಿತ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಇ-ಶ್ರಮ್ ಕಾರ್ಡ್ ನೊಂದಣಿ ಅಭಿಯಾನ ಉದ್ಘಾಟನೆ
ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ, ಕೆಮ್ಮಣ್ಣು ಬಿಜೆಪಿ ಇವರ ಆಶ್ರಯದಲ್ಲಿ ಹಾಗೂ ಪ್ರಸಾದ್ ನೇತ್ರಾಲಯದ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ 8 ವರ್ಷದ ಕೇಂದ್ರ ಸರಕಾರದ ಆಡಳಿತದ ಸಂಭ್ರಮಾಚರಣೆ ಸಂದರ್ಭದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮ “ನೇತ್ರ ಉಚಿತ ತಪಾಸಣಾ ಶಿಬಿರ ಮತ್ತು ಕನ್ನಡಕ ವಿತರಣೆ ಇ-ಶ್ರಮ್ ಕಾರ್ಡ್ ನೊಂದಣಿ ಅಭಿಯಾನ” ಇಂದು ದಿನಾಂಕ 12-06-2022 ರಂದು ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಭದ್ರಕಾಳಿ ಮಹಾಮಾರಿಕಾಂಬ ದೇವಸ್ಥಾನ ಗುಡ್ಯಾಂ ನಲ್ಲಿ ನಡೆಯಿತು.
ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಂಕೇತಿಕವಾಗಿ ಇ-ಶ್ರಮ್ ಕಾರ್ಡ್ ವಿತರಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಉಪಾಧ್ಯಕ್ಷರಾದ ಪ್ರಶಾಂತ್ ಕಾಂಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಡುಪಿ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ರಾಜ್ಯ ಎಸ್.ಟಿ ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಕಲ್ಯಾಣಪುರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸತೀಶ್ ನಾಯ್ಕ್, ಪ್ರಧಾನ ಕಾರ್ಯದರ್ಶಿಗಳಾದ ರವಿಚಂದ್ರ ಸನಿಲ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಮಾಲತಿ ಸುಧಾಕರ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕರಾದ ಡಾ. ನಾಡೋಜ ಕೃಷ್ಣಪ್ರಸಾದ್ ಕೆಮ್ಮಣ್ಣು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.