ಉಡುಪಿ ಗ್ರಾಮಾಂತರ ಬಿಜೆಪಿ ವತಿಯಿಂದ ವಿಕಾಸ್ ತೀರ್ಥ ಬೈಕ್ ರ‍್ಯಾಲಿ

ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷ ಯಶಸ್ವಿ ಆಡಳಿತ ಪೂರೈಸಿದ ಸುಸಂದರ್ಭದಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ವತಿಯಿಂದ ಇಂದು ದಿನಾಂಕ 19-06-2022 ರಂದು ನಡೆದ ವಿಕಾಸ್ ತೀರ್ಥ ಬೈಕ್ ರ‍್ಯಾಲಿಯಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ಅವರು ಪಾಲ್ಗೊಂಡರು.
ಬ್ರಹ್ಮಾವರ ಬಿಜೆಪಿ ಕಚೇರಿಯಿಂದ ವಿಕಾಸ್ ತೀರ್ಥ ಬೈಕ್ ರ‍್ಯಾಲಿಗೆ ಚಾಲನೆ ನೀಡಲಾಯಿತು. ಶಾಸಕರಾದ ಕೆ. ರಘುಪತಿ ಭಟ್ ರವರು ಬ್ರಹ್ಮಾವರದಿಂದ ಸಂತೆಕಟ್ಟೆ ವರೆಗೆ ಬುಲೆಟ್ ಚಲಾಯಿಸಿ ರ‍್ಯಾಲಿ ಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಗ್ರಾಮಾಂತರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಗಣೇಶ್ ಸೂರಾಲು, ರಾಜ್ಯ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿಗಳಾದ ಶ್ವೇತಾ ಪೂಜಾರಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ, ಗ್ರಾಮಾಂತರ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅರ್ಜುನ್ ಪ್ರಭು ಹಾಗೂ ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.