ಕರಾವಳಿ

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ. ದೂರು ದಾಖಲು

ಪಡುಬಿದ್ರಿ: ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಛೇರಿಯಲ್ಲಿದ್ದ 20,000 ರೂ. ಮೌಲ್ಯದ ಎರಡು ಬೆಳ್ಳಿಯ ತಟ್ಟೆಗಳನ್ನು ಕಳ್ಳತನ ಮಾಡಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಳ್ಳರು ಧ್ವಜಸ್ತಂಭದ ಮೇಲೇರಿ ದೇಗುಲದ ಒಳಗೆ ಪ್ರವೇಶಿಸಿದ್ದು, ಹೊರ ಹೋಗುವಾಗ ಪಶ್ಚಿವದ ಮುಖ್ಯದ್ವಾರ ತೆಗೆದುಕೊಂಡು ಹೋಗಿದ್ದಾರೆ. ಶ್ರೀ ಗಣಪತಿ ದೇವರ ಗುಡಿಯ ಒಳಗೆ ಪ್ರವೇಶಿಸಿದ ಕಳ್ಳರು ಗಣಪತಿಯ ಶಿಲಾಮೂರ್ತಿಯ ಮುಖವಾಡಕ್ಕೆ ಇಡಲಾದ ಪಂಚಲೋಹದ ತಗಡು ಹಾಗೂ ಪಾಣಿಪೀಠದ ಕವಚಗಳನ್ನು ತೆಗೆದು ಅಲ್ಲೇ ಬಿಟ್ಟು ಹೋಗಿದ್ದಾರೆ. ದ್ವಾರದಲ್ಲಿದ್ದ ಎರಡು ಲಾಕರ್ ಕಾಣಿಕೆ ಡಬ್ಬಿಯನ್ನು ಒಡೆಯಲು ಯತ್ನಿಸಿದ್ದು ಕಂಡು ಬಂದಿದೆ. ದೇಗುಲದ ಕಛೇರಿಯ ಬೀರುವನ್ನು ಮುರಿದು ಜಾಲಾಡಿದ್ದಾರೆ. ಇನ್ನು ಅಲ್ಲಿಂದ ಎರಡು ಬೆಳ್ಳಿಯ ತಟ್ಟೆಗಳನ್ನು ಕಳವುಗೈದಿದ್ದಾರೆ.

ದೇಗುಲದ ಸಹ ಅರ್ಚಕ ರಾಜಾರಾಮ್ ಭಟ್ ಅವರು ಬೆಳಗ್ಗೆ ದೇಗುಲಕ್ಕೆ ಬಂದಾಗ ಬಾಗಿಲು ತೆರೆದಿದ್ದು, ಕಳ್ಳತನವಾದ ಕುರಿತು ಆಡಳಿತ ಮಂಡಳಿಯವರಿಗೆ ಮಾಹಿತಿ ನೀಡಿದ್ದಾರೆ. ಇದೀಗ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!