ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮ

ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ದಿನಾಂಕ 01-06-2022 ರಿಂದ 10-06-2022 ರ ವರೆಗೆ ಅದ್ದೂರಿಯಾಗಿ ಸುಸಜ್ಜಿತ ವ್ಯವಸ್ಥೆ ಮೂಲಕ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದಕ್ಕೆ ಸಹಕರಿಸಿದ ಕಾರ್ಯಕರ್ತರ ಅಭಿನಂದನಾ ಕಾರ್ಯಕ್ರಮದ ದಿನಾಂಕ 19-06-2022 ರಂದು ಅಮೃತ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದ್ದು, ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪುರುಶೋತ್ತಮ್ ಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ನಾಗೇಶ್ ಹೆಗ್ಡೆ, ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಮೋಹನ್ ಉಪಾಧ್ಯ, ದೇವಸ್ಥಾನದ ಅರ್ಚಕರಾದ ರಾಧಾಕೃಷ್ಣ ಉಪಾಧ್ಯಾಯ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ಹೊರೆ ಕಾಣಿಕೆ ಸಮಿತಿ ಅಧ್ಯಕ್ಷರಾದ ಭಾಸ್ಕರ ಸೇರಿಗಾರ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಕಿಶೋರ್ ಸಾಲ್ಯಾನ್, ನಾಗರಾಜ ಶೆಟ್ಟಿ, ಮಂಜುನಾಥ್ ಹೆಬ್ಬಾರ್, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ನಿತ್ಯಾನಂದ ಕಾಮತ್ ಉಪಸ್ಥಿತರಿದ್ದರು.