ವಿಶೇಷ ಲೇಖನಗಳು
ಸ್ವ-ಸಹಾಯ ಸಂಘಗಳಿಗೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ
ಉಡುಪಿ: ನಗರಸಭೆ ವತಿಯಿಂದ ಆತ್ಮನಿರ್ಭರ್ ನಿಧಿ
ಯೋಜನೆಯಡಿ ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆ ಮಂತ್ರಾಲಯವು ಪ್ರಧಾನಮಂತ್ರಿ ಕಿರು ಅಹಾರ ಸಂಸ್ಕರಣಾ ಉದ್ದಿಮೆ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಡೇ ನಲ್ಕ್ ಅಭಿಯಾನದಡಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಯಲ್ಲಿ ತೊಡಗಿಸಿಕೊಂಡಿರುವ ಉಡುಪಿ ನಗರಸಭಾ
ವ್ಯಾಪ್ತಿಯ ಸ್ವ-ಸಹಾಯ ಸಂಘದ ಸದಸ್ಯರು ಬಂಡವಾಳ ಮತ್ತು ಸಣ್ಣ ಉಪಕರಣಗಳ ಖರೀದಿಗೆ 40,000 ರೂ. ವರೆಗೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.