ಕರಾವಳಿ
ಬೈಲೂರು ಪರಶುರಾಮ ಥೀಮ್ ಪಾರ್ಕ್‌ಗೆ ಸಚಿವರ ಭೇಟಿ
ಬೈಲೂರಿನ ಉಮಿಕಲ್ ಕುಂಜದಲ್ಲಿ
ನಿರ್ಮಾಣಗೊಳ್ಳುತ್ತಿರುವ ಪರಶುರಾಮ ಥೀಮ್ ಪಾರ್ಕ್‌ಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನಿಲ್ ಕುಮಾರ್ ಜೂ. 23ರಂದು ಮುಂಜಾನೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿ ಡಿಸೆಂಬರ್ ಒಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೂರ್ಮರಾವ್,
ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ಉಡುಪಿ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಅರುಣ್ ಕುಮಾರ್, ಕಾರ್ಕಳ ಕ್ಷೇತ್ರಾಧ್ಯಕ್ಷರಾದ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ್ ಸಾಲಿಯಾನ್, ರವೀಂದ್ರ ಕುಮಾರ್, ಮಾಜಿ ತಾ.ಪಂ. ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಜಿ.ಪಂ. ಮಾಜಿ ಸದಸ್ಯರಾದ ಉದಯ ಎಸ್. ಕೋಟ್ಯಾನ್, ಸುಮಿತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.