ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ
ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಶನಿವಾರ ಕೊಂಚ ಇಳಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 15,940 ಮಂದಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ.
ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನಿಂದ 20 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 524974 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲಿ ಈಗ 91,779 ಸಕ್ರಿಯ ಪ್ರಕರಣಗಳಿದ್ದು,
ದೈನಂದಿನ ಪಾಸಿಟಿವಿಟಿ ದರ ಶೇ.4.39ರಷ್ಟಿದೆ.