ಮೈಸೂರು : ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಪ್ರಕರಣ : ಮೂವರು ಶಂಕಿತರ ವಶ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಆಗಸ್ಟ್ 24ರ ಸಂಜೆ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿ ಗುಡ್ಡ ಪ್ರದೇಶದಲ್ಲಿ ಮಹಾರಾಷ್ಟ್ರ ಮೂಲದ ನಗರದ ಖಾಸಗಿ ಕಾಲೇಜಿನ ಎಂ ಬಿ ಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಯೊಬ್ಬಳ ಸಾಮೂಹಿಕ ಅತ್ಯಾಚಾರ ನಡೆದಿತ್ತು . ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ .
ಘಟನಾ ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ದಿ, ಪೊಲೀಸ್ ಆಯುಕ್ತ ಚಂದ್ರಗುಪ್ತ ಸೇರಿದಂತೆ ಪೊಲೀಸರ ತಂಡ ಭೇಟಿ ನೀಡಿ, ಪರಿಶೀಲನೆ ನಡೆಸಿದೆ. ಘಟನಾ ಸ್ಥಳದಲ್ಲಿ ದುಷ್ಕರ್ಮಿಗಳು ಮದ್ಯ ಸೇವನೆ ಮಾಡಿದ್ದರು. ಆರೋಪಿಗಳ ಪತ್ತೆಗಾಗಿ ಪೊಲೀಸರು ಮೊಬೈಲ್ ಟವರ್ ಜಾಡು ಹಿಡಿದು ಶೋಧಕಾರ್ಯ ಮುಂದುವರೆಸಿದ್ದು, ಸದ್ಯ ಮೂವರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.