ರಾಜ್ಯ
ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ : ಇಬ್ಬರು ಮೃತ್ಯು

ತುಮಕೂರು: ತಿಪಟೂರು ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಮತ್ತಿಬ್ಬರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ತಿಮ್ಮಲಾಪುರ ಮತ್ತಿಹಳ್ಳಿ ಗೇಟ್ ಬಿ. ಎಚ್. ರಸ್ತೆ 206 ಹತ್ತಿರ ಇಂದು ಬೆಳಗ್ಗೆ ನಡೆದಿದೆ.
ತಿಪಟೂರಿನಿಂದ ಅರಸೀಕೆರೆಯತ್ತ ತೆರಳುತ್ತಿದ್ದ ಕಾರಿಗೆ ಶಿವಮೊಗ್ಗದಿಂದ ಬೆಂಗಳೂರಿನತ್ತ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ ರಸ್ತೆ ಬದಿಗೆ ಇಳಿದಿದೆ. ಮೃತರು ಕಾರಿನಲ್ಲಿದ್ದ ಪ್ರಯಾಣಿಕರು ಎಂದು ತಿಳಿದು ಬಂದಿದೆ.ಇಬ್ಬರ ಸ್ಥಿತಿ ತುಂಬಾ ಗಂಭೀರವಾಗಿದೆ ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.