ಬ್ರಹ್ಮಾವರ :ಕುಖ್ಯಾತ ಅಂತರ್ ರಾಜ್ಯ ಕಳ್ಳರ ಬಂಧನ ಚಿನ್ನಾಭರಣ, ಕಾರು ಸಹಿತ 20ಲಕ್ಷ ರೂ. ಸೊತ್ತು ವಶ

ಉಡುಪಿ : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಮೂವರು ಅಂತರಾಜ್ಯ ಕಳ್ಳರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಹೆಬ್ರಿಯ ಶಿವಪುರ ಗ್ರಾಮದ ಪ್ರಸ್ತುತ ಬೆಂಗಳೂರು ನಿವಾಸಿ ದಿಲೀಪ್ ಶೆಟ್ಟಿ, ತಮಿಳುನಾಡಿನ
ಕೊಯಿಮುತ್ತೂರು ಮೂಲದ ರಾಜನ್, ಷಣ್ಮುಗಂ ಬಂಧಿತ ಆರೋಪಿಗಳು.
ಆರೋಪಿಗಳ ಪೈಕಿ ದಿಲೀಪ್ ಶೆಟ್ಟಿ ಹಾಗೂ ರಾಜನ್ ಇವರನ್ನು ವಿಚಾರಿಸಿದಾಗ ಬ್ರಹ್ಮಾವರ ಠಾಣಾ
ಸರಹದ್ದಿನಲ್ಲಿ 2 ಮನೆ ಕಳ್ಳತನ, ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ-1 ಮನೆ ಕಳ್ಳತನ ಹಾಗೂ ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ 2 ಮನೆ ಕಳ್ಳತನ ನಡೆಸಿದ್ದು, ಸ್ವತ್ತು, ಚಿನ್ನಾಭರಣ ಕಳವು
ಮಾಡಿರುವುದಾಗಿ ತನ್ನೊಪ್ಪಿಕೊಂಡಿದ್ದಾರೆ. ಹಾಗೂ ಬಂಧಿತ ಆರೋಪಿಗಳಿಂದ ಸುಮಾರು 13 ಲಕ್ಷ
ರೂ.ಮೌಲ್ಯದ ಚಿನ್ನಾಭರಣ 20,000 ರೂ. ಮೌಲ್ಯದ 500 ಗ್ರಾಂ ಬೆಳ್ಳಿ ಆಭರಣಗಳು. ಕೃತ್ಯಕ್ಕೆ ಬಳಸಿದ
2 ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ.
ಜು.29 ರಂದು ಬ್ರಹ್ಮಾವರ ಠಾಣಾ ಸರಹದ್ದಿನ ಹಾವಂಜೆ ಗ್ರಾಮದ ಶೇಡಿಗುಳಿ ಎಂಬಲ್ಲಿ
ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ ಸ್ಯಾಂಟ್ರೋ ಕಾರನ್ನು ನಿಲ್ಲಿಸಿ ಪರಿಶೀಲಿಸಿದಾಗ ಕಾರಿನಲ್ಲಿ
ಮನೆಯ ಬಾಗಿಲು ಒಡೆಯುವ ಕಬ್ಬಿಣದ ರಾಡ್, ಬೆಳ್ಳಿಯ ಆಭರಣಗಳು ಪತ್ತೆಯಾಗಿದ್ದು, ಮೂವರನ್ನು
ಬಂಧಿಸಿ 5 ಮನೆ ಕಳ್ಳತನ ಪ್ರಕರಣಗಳನ್ನು ಭೇಧಿಸಿದ್ದಾರೆ.
ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷರಾದ ವಿಷ್ಣುವರ್ಧನ್ ಎನ್,
ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎನ್.ಟಿ ಸಿದ್ದಲಿಂಗಪ್ಪ ರವರ ಮಾರ್ಗದರ್ಶನದಂತೆ ಉಡುಪಿ
ಉಪ ವಿಭಾಗ ಪೊಲೀಸ್ ಕಾಪಾಧೀಕ್ಷಕ ಸುಧಾಕರ ಎಸ್ ನಾಯ್ಕ, ನಿರ್ದೇಶನದಂತೆ, ಬ್ರಹ್ಮಾವರ
ಠಾಣಾ ಸಿ.ಪಿ.ಐ ಅನಂತ ಪದ್ಮನಾಭ, ಬ್ರಹ್ಮಾವರ ಠಾಣಾ ಪಿ.ಎಸ್.ಐ ಗುರುನಾಥ ಬಿ ಹಾದಿಮನಿ,
ತನಿಖಾ ಪಿ.ಎನ್.ಐ ಮುಕ್ತಾಬಾಯಿ, ಕೋಟ ರಾಣಾ ಪಿ.ಎಸ್.ಐ ಮರು ಬಿ.ಇ, ಬ್ರಹ್ಮಾವರ ಠಾಣಾ
ಪ್ರೋಬೆಷನರಿ ಪಿ.ಎಸ್.ಸುಬ್ರಮಣ್ಯ ದೇವಾಡಿಗ, ಬ್ರಹ್ಮಾವರ ಠಾಣಾ ಸಿಬ್ಬಂದಿಯವರಾದ
ವೆಂಕಟರಮಣ ದೇವಾಡಿಗ, ಪ್ರವೀಣ ಶೆಟ್ಟಿಗಾರ್, ಮೊಹಮ್ಮದ್ ಅಜ್ವಲ್, ರಾಘವೇಂದ್ರ ಕಾರ್ಕಡ,
ನಲಿತಾ, ಸುರೇಶ ಬಾಬು, ದಿಲೀಪ್, ಅಣ್ಣಪ್ಪ ಹಾಗೂ ಕೋಟ ರಾಣಾ ಸಿಬ್ಬಂದಿಯವರಾದ ಪ್ರಸನ್ನ
ರಾಘವೇಂದ್ರ ಗುಂಡಪ್ಪ ಗೋಪಾಲ ನಾಯ್ಕ ಮತ್ತು ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿ ದಿನೇಶ್
ಪಾಲ್ಗೊಂಡಿದ್ದರು.
ಇನ್ನು ಬಂಧಿತ ಆರೋಪಿಗಳ ಪೈಕಿ ರಾಜನ್ ತನ್ನ 19 ನೇ ವಯಸ್ಸಿನಿಂದ ಕಳ್ಳತನ ಮಾಡುತ್ತಿದ್ದು, ಆತನ
ವಿರುದ್ಧ ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಮನೆ ಕಳ್ಳತನ ಪ್ರಕರಣಗಳು
ದಾಖಲಾಗಿರುತ್ತದೆ. ಕರ್ನಾಟಕ ರಾಜ್ಯದ ಚಿಕ್ಕಮಗಳೂರು-1, ಕುಮಟಾ-1, ಸುರತ್ಕಲ್ 4 ಹಾಗೂ ಕೇರಳ ರಾಜ್ಯದ ತಿರಸೂರು-4, ಪಟ್ಟಂಬಿ-4, ತರು-1, ತಮಿಳುನಾಡು ರಾಜ್ಯದ ನೀಲಗಿರಿ-3
ಪ್ರಕರಣಗಳು ದಾಖಲಾಗಿರುತ್ತದೆ. ಒಟ್ಟು ಉಡುಪಿ ಜಿಲ್ಲೆ ಸೇರಿ ರಾಜನ್ ಮೇಲೆ 22 ಕೇಸು
ದಾಖಲಾಗಿದ್ದು ವಿವಿಧ ಠಾಣೆಗಳಲ್ಲಿ ಜಾಮೀನು ರಹಿತ ವಾರೆಂಟು ಇರುತ್ತದೆ. ಹಾಗೂ ದಿಲೀಪ್ ಶೆಟ್ಟಿ
ಎಂಬಾತನು ಪ್ಯಾಂಟ್ರೋ ಕಾರು ಮತ್ತು ಓಮಿನಿ ಕಾರನ್ನು ಬಳಸಿಕೊಂಡು ಬೆಂಗಳೂರಿನಿಂದ ಕಾರಿನಲ್ಲಿ
ಕುಖ್ಯಾತ ಕಳ್ಳ ರಾಜನ್ ಕುಟ್ಟಿ ವಿಜಯನ್, ಸಜಿತ್ ವರ್ಗಿನ್ ಇವರೊಂದಿಗೆ ಬಂದು ಹಾಸನ, ದ.ಕ
ಮತ್ತು ಉಡುಪಿ ಭಾಗದಲ್ಲಿ ಮನೆ ಕಳ್ಳತನ ನಡೆಸುತ್ತಿದ್ದನು ದಿಲೀವ್ ಶೆಟ್ಟಿ ವಿರುದ್ಧ ಈ ಹಿಂದೆ ಹಾಸನದ ಅರಸೀಕೆರೆ, ಬೆಂಗಳೂರಿನ ಆರ್.ಎಂ.ಸಿ ಯಾರ್ಡ್, ನಂದಿನಿ ಲೇಬೌಟ್ ಮತ್ತು ಮಂಡ್ಯದ
ನಾಗಮಂಗಲ, ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಲಿಗೆ, ಅಬಕಾರಿ, ಹನಿ-ಟ್ಯಾಪ್ ಪ್ರಕರಣ ಹಾಗೂ
ಹೆಬ್ರಿ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಹಲ್ಲೆ ಪ್ರಕರಣ ಹಾಗೂ ಜಾಮೀನು ರಹಿತ ವಾರೆಂಟು ಇರುತ್ತದೆ
ಎಂದು ತಿಳಿದು ಬಂದಿದೆ.