ಕರಾವಳಿ

ಆರೂರು ಭಾಗದ ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಉಡುಪಿ : ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿ ತೋಡುಗಳು ತುಂಬಿ ಹರಿಯುತ್ತಿದ್ದು, ಹಲವಾರು ಭಾಗಗಳಲ್ಲಿ ಜಲ ಪ್ರವಾಹ ಉಂಟಾಗಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿರುವುದಲ್ಲದೆ ಕೃಷಿಯೂ ಹಾನಿಗೊಳಗಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ದಿನಾಂಕ 11-07-2022 ರಂದು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬ್ರಹ್ಮಾವರದ ಆರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ತೆಂಕಬೆಟ್ಟು ನೆರೆ ಪೀಡಿತ ಪ್ರದೇಶಗಳಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಆರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಮತಾ ಶೆಟ್ಟಿ, ಉಪಾಧ್ಯಕ್ಷರಾದ ಗುರುರಾಜ್ ರಾವ್, ಉಡುಪಿ ಜಿಲ್ಲಾ ಗ್ರಾಮೀಣ ಪ್ರಕೋಷ್ಠಗಳ ಸಂಚಾಲಕರಾದ ರಾಜೀವ ಕುಲಾಲ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್, ಸಚಿನ್ ಪೂಜಾರಿ ಮತ್ತು ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಬ್ರಹ್ಮಾವರ ತಹಶೀಲ್ದಾರರಾದ ರಾಜಶೇಖರ್ ಮೂರ್ತಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಕೆಂಪೇಗೌಡ ಹಾಗೂ ಆರೂರು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!