ಉಡುಪಿ : ಸಾವರ್ಕರ್ ಕಟೌಟ್ ವಿವಾದ : ಕಾಂಗ್ರೆಸ್ ಕಾರ್ಯಕರ್ತರಿಂದ ಕಟೌಟ್ ತೆರವುಗೆ ಮನವಿ : ಹೋರಾಟದ ಎಚ್ಚರಿಕೆ

ಉಡುಪಿ: ನಗರದ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆಗೆ ಶುಭ ಕೋರಲು ಹಾಕಲಾದ ಸಾವರ್ಕರ್ ಭಾವಚಿತ್ರ ಇರುವ ಪ್ಲೆಕ್ಸ್‌ನ್ನು ಕೂಡಲೇ ತೆರವುಗೊಳಿಸುವಂತೆ ಮಂಗಳವಾರ ಸ್ಥಳದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದರು.
ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬ್ರಹ್ಮಗಿರಿ ಸರ್ಕಲ್‌ಗೆ ಆಗಮಿಸಿ, ವಿವಾದಿತ ಪ್ಲೆಕ್ಸ್‌ನ್ನು ಕೂಡಲೇ ತೆರವುಗೊಳಿಸಬೇಕು. ಇಲ್ಲದಿದ್ದರೆ ನಾಳೆ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಖ್ಯಾತ್ ಶೆಟ್ಟಿ, ಸಾರ್ವಕರ್ ಫೆಕ್ಸ್ ವಿಚಾರದಲ್ಲಿ ರಾಜ್ಯದ ಎಲ್ಲ ಕಡೆ ಗಲಾಟೆಗಳು ನಡೆಯುತ್ತಿವೆ. ಇದೀಗ ಶಾಂತಾವಾಗಿರುವ ಉಡುಪಿಯಲ್ಲಿ ಹಾಕಿರುವ ಪ್ಲೆಕ್ಸ್‌ನಿಂದ ಗೊಂದಲ ಹಾಗೂ ಬಿಗುವಿನ ವಾತಾವರಣಗಳು ಕಂಡುಬರುತ್ತಿವೆ. ಆದುರಿಂದ ಯಾವುದೇ ಗಲಾಟೆ ಗಳಿಗೆ ಅವಕಾಶ ಕಲ್ಪಿಸದಂತೆ ಕೂಡಲೇ ಈ ಪ್ಲೆಕ್ಸ್‌ನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೆರ, ಹಮದ್, ಶರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.