ರಾಷ್ಟ್ರೀಯ
ಇಂದಿನ ಕೊರೊನಾ ಪ್ರಕರಣ ವಿವರ
ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ
ಪ್ರಮಾಣದಲ್ಲಿ ತೀವ್ರ ಹೆಚ್ಚಳವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 20,038 ಮಂದಿಯಲ್ಲಿ ಸೋಂಕಿನ ಲಕ್ಷಣ ದೃಢಪಟ್ಟಿದೆ.
ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 16, 994 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆಅವಧಿಯಲ್ಲಿ 47 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಕೊರೋನಾದಿಂದ ದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇದೀಗ 5, 25, 604ಕ್ಕೆ ತಲುಪಿದೆ.
ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 1,39,073 ಆಗಿದೆ. ದೇಶದಲ್ಲಿ ಪಾಸಿಟಿವಿಟಿ ದರ ಶೇಕಡ 4.44ಕ್ಕೆ ತಲುಪಿದೆ. ಇದು ಆತಂಕ ಮೂಡಿಸಿದೆ.