ಉಡುಪಿ: ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್ ವತಿಯಿಂದ ಡಯಾಲಿಸಿಸ್ ಕೇಂದ್ರಕ್ಕೆ ಐಸಿಯು ಬೆಡ್ ಕೊಡುಗೆ
ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್ ಸಾಮಾಜಿಕ ಕಳಕಳಿಯ ಭಾಗವಾಗಿ ಹಾರಾಡಿಯ ಡಯಾಲಿಸಿಸ್ ಕೇಂದ್ರಕ್ಕೆ ಎರಡು ಐಸಿಯು ಹಾಸಿಗೆಗಳನ್ನು ಕೊಡುಗೆಯಾಗಿ ನೀಡಿತು. ಹಾರಾಡಿಯಲ್ಲಿರುವ ಡಯಾಲಿಸಿಸ್ ಕೇಂದ್ರವನ್ನು ರೋಟರಿ ಕ್ಲಬ್ ಬ್ರಹ್ಮಾವರ ಅವರ ಸುವರ್ಣ ಮಹೋತ್ಸವ
ಯೋಜನೆಯ ಸಂದರ್ಭದಲ್ಲಿ ಕೊಡುಗೆಯಾಗಿ ನೀಡಿತ್ತು. ಇದನ್ನು ಡಾ ಎವಿ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ನಿರ್ವಹಿಸುತ್ತದೆ.
ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್, ಫಿಸಿಯೋಕೇರ್
ಫಿಸಿಯೋಥೆರಪಿ ಮತ್ತು ಪುನರ್ವಸತಿ ಕೇಂದ್ರದ
ಉದ್ಘಾಟನೆಯ ಸಂದರ್ಭದಲ್ಲಿ ಎರಡು ಐಸಿಯು
ಹಾಸಿಗೆಗಳನ್ನು ಕೇಂದ್ರಕ್ಕೆ ಕೊಡುಗೆಯಾಗಿ ನೀಡಿತು.
ಡಾ.ಪಿ.ವಿ.ಭಂಡಾರಿ ಮತ್ತು ರೋಟರಿ ಕ್ಲಬ್ ಬ್ರಹ್ಮಾವರ ಸದಸ್ಯರು ಈ ಕಾರ್ಯವನ್ನು ನೆರವೇರಿಸಿದರು. ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್ ವತಿಯಿಂದ ಖ್ಯಾತ ಉದ್ಯಮಿ ಹಾಗೂ ಸಮಾಜ ಸೇವಕ ಶಶಿಧರ ಶೆಟ್ಟಿ ಫಲಾನುಭವಿಗಳಿಗೆ ಹಾಸಿಗೆ ವಿತರಿಸಿದರು.
ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ಸ್ ನ ಮಾಲಕ ರವೀಂದ್ರ ಶೆಟ್ಟಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.