ಪುತ್ತೂರು: ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಮಾಜಿ ಯೋಧ ಅರೆಸ್ಟ್

ಪುತ್ತೂರು: ವಿವಾಹಿತ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಮಾಜಿ ಸೈನಿಕನನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.
ಅದೇ ಕಂಪನಿಯಲ್ಲಿ ಉದ್ಯೋಗಿಯಾಗಿರುವ ತಿಂಗಳಾಡಿ ನಿವಾಸಿಯಾಗಿರುವ ವಿವಾಹಿತ ಮಹಿಳೆ ನೀಡಿದ ದೂರಿನ ಮೇರೆಗೆ ಕುಂಬ್ರ ಕುರಿಕ್ಕಾರ ನಿವಾಸಿ, ಖಾಸಗಿ ಕಂಪನಿಯೊಂದರ ಭದ್ರತಾ ಸಿಬ್ಬಂದಿ ಹಾಗೂ ಮಾಜಿ ಯೋಧ ವಿದೀಪ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜು.16ರಂದು ಮಹಿಳೆ ತನ್ನ ಕೆಲಸ ಮುಗಿಸಿ ಕುಂಬ್ರದಿಂದ ತಿಂಗಳಾಡಿಗೆ ಬಸ್‌ನಲ್ಲಿ ಪ್ರಯಾಣಿಸಿ ತನ್ನ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದದ್ದಾಗ, ವಿದೀಪ್ ತನ್ನ ಬೈಕ್‌ನಲ್ಲಿ ಆಕೆಯನ್ನು ಹಿಂಬಾಲಿಸಿ ತಿಂಗಳಾಡಿ ದರ್ಬೆ ಎಂಬಲ್ಲಿ ಅಡ್ಡಗಟ್ಟಿ ಆಕೆಯೊಂದಿಗೆ ಮಾತನಾಡಲು ಯತ್ನಿಸಿ ಅಸಭ್ಯವಾಗಿ ವರ್ತಿಸಿದ್ದು, ಬಳಿಕ ಸಾರ್ವಜನಿಕರು ಬರುತ್ತಿರುವುದನ್ನು ಗಮನಿಸಿದ ವಿದೀಪ್ ಸ್ಥಳದಿಂದ ಹೋಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಸಂಪ್ಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.