ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಆಸ್ಪತ್ರೆಯಲ್ಲಿ ಮೃತ್ಯು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ಬೈಕಂಪಾಡಿಯ ಮೀನಕಳಿಯ ರಸ್ತೆಯಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆಗೊಳಾಗದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಸುರತ್ಕಲ್ ರೌಡಿ ಶೀಟರ್ ರಾಘವೇಂದ್ರ ಅಲಿಯಾಸ್ ರಾಜ ಬಂಗೇರ (28) ಗಂಭೀರ ಗಾಯ ಗಾಯಗೊಂಡು ಸಾವನ್ನಪ್ಪಿದ್ದಾನೆ.
ಗಂಭೀರವಾಗಿ ಗಾಯಗೊಂಡ ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಆದರೆ ಅಲ್ಲಿ ಮೃತಪಟ್ಟ ಬಗ್ಗೆ ಮಾಹಿತಿ ತಿಳಿದು ಬಂದಿದೆ.
ರಾತ್ರಿ ಬೈಕಂಪಾಡಿ ಸುಪ್ರಿಯಾ ಬಾರ್ ಬಳಿಯಿಂದ ಮೀನಕಳಿಯ ರಸ್ತೆಯಾಗಿ ಹೋಗುತ್ತಿದ್ದಾಗ ರಾಘವೇಂದ್ರ ಅವರ ಪರಿಚಯಸ್ಥರೇ ದ್ವಿಚಕ್ರ ವಾಹನದಲ್ಲಿ ಬಂದು ಅಡ್ಡಗಟ್ಟಿ ತಲವಾರು ಮತ್ತು ಚಾಕುವಿನಿಂದ ಮುಖ, ತಲೆ, ಕೈಗೆ ಹೊಡೆದಿದ್ದು ಗಂಭೀರ ಪೆಟ್ಟಾಗಿ ಬಿದ್ದಿದ್ದಾರೆ.
ಸ್ನೇಹಿತರು ಕೊಲೆಯತ್ನ ನಡೆಸಿದ ಬಗ್ಗೆ ಗಾಯಾಳು ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾನೆ ಎಂದು ತಿಳಿದು ಬಂದಿದೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಘಟನೆ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.