ಉಡುಪಿ ಜಿಲ್ಲೆಯಲ್ಲಿ ತಗ್ಗಿದ ಕೊರೊನಾ: ಇಂದು 640 ಮಂದಿಗೆ ಪಾಸಿಟಿವ್; ಉಡುಪಿಯ ಮೂವರು ಸಹಿತ ನಾಲ್ವರು ಮೃತ್ಯು

ಉಡುಪಿ ಮೇ 25: ಜಿಲ್ಲೆಯಲ್ಲಿ ಇಂದು ಜನತೆ ಸ್ವಲ್ಪ ಮಟ್ಟಿನ ನಿಟ್ಟುಸಿರು ಬಿಡುವಂತಾಗಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ ಕಂಡಿದೆ.
ಜಿಲ್ಲೆಯಲ್ಲಿ ಇಂದು 640 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಪೈಕಿ ಉಡುಪಿಯಲ್ಲಿ 368, ಕುಂದಾಪುರ 155, ಕಾರ್ಕಳ 115 ಹಾಗೂ ಹೊರ ಜಿಲ್ಲೆಯ ಇಬ್ಬರಲ್ಲಿ ಸೋಂಕು ಇರುವುದು ಪತ್ತೆಯಾಗಿದೆ. ಈ ಮೂಲಕ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 5792 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ 4 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಪೈಕಿ ಉಡುಪಿಯ ಮೂವರು ಹಾಗೂ ಕಾರ್ಕಳದ ಓರ್ವ ಮಹಿಳೆ ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮೇ. 24 ರಂದು ಜಿಲ್ಲೆಯಲ್ಲಿ 695 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಹೊರ ಬಂದಿದ್ದು, ಈ ವರೆಗೆ ಒಟ್ಟು 48,126 ಮಂದಿ ಗುಣಮುಖರಾಗಿದ್ದಾರೆ.
ಮೇ. 24 ರ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 5,72105 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 54,228 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ ಒಟ್ಟು 310 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.