ಕರಾವಳಿ

ಭೂ ಒಡೆತನ ಯೋಜನೆಯಡಿ ಜಮೀನು ಖರೀದಿ

ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ಅಧೀನಕ್ಕೊಳಪಟ್ಟಿರುವ ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಭೂ ಒಡೆತನ ಯೋಜನೆಯನ್ನು ಅನುಷ್ಟಾನಗೊಳಿಸುತ್ತಿದ್ದು, ಈ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಘಟಕ ವೆಚ್ಚ 15 ಲಕ್ಷ ರೂ.ಗಳಲ್ಲಿ ಲಭ್ಯವಾಗುವಷ್ಟು ಖುಷ್ಕಿ ಅಥವಾ ತರಿ ಅಥವಾ ಭಾಗಾಯ್ತು ಜಮೀನನ್ನು ಖರೀದಿಸಿಕೊಡಲಾಗುವುದು.

ಪರಿಶಿಷ್ಟ ಜಾತಿ ಹಾಗೂ ಪಂಗಡದವರು ಹೊರತುಪಡಿಸಿ ಇತರೆ ಜಾತಿಗೆ ಸೇರಿದ ಭೂ ಮಾಲೀಕರು ತಮ್ಮ ಜಮೀನನ್ನು ನಿಗಮಕ್ಕೆ ಮಾರಾಟ ಮಾಡಲು ಆಸಕ್ತಿ ಇದ್ದಲ್ಲಿ, ಜಿಲ್ಲಾ ವ್ಯವಸ್ಥಾಪಕರು, ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ರಜತಾದ್ರಿ ಮಣಿಪಾಲ, ದೂರವಾಣಿ ಸಂಖ್ಯೆ:0820-2574884 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!