ಕರಾವಳಿ

ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ವಿದ್ಯಾ ಪೋಷಕ ನಿಧಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟನೆ

ಕಾಪು : ಜಿ.ಎಸ್.ಬಿ ಸಮಾಜ ಹಿತರಕ್ಷಣಾ ವೇದಿಕೆ(ರಿ.), ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಮುದರಂಗಡಿ ಇದರ ಸಹಭಾಗಿತ್ವದಲ್ಲಿ ಜುಲೈ 24ರಂದು ವಿದ್ಯಾ ಪೋಷಕ ನಿಧಿ (2022-23)ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು
ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದ ಮಾಧವ ಮಂಗಲ ಸಭಾಭವನದಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮವನ್ನು ಮುಂಬಯಿಯ ಖ್ಯಾತ ಸುಪ್ರೀಂ ಕೋರ್ಟ್ ವಕೀಲರಾದ ರವಿಚಂದ್ರ ಕಿಣಿ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು ವಿದ್ಯೆಗಿಂತ ಸಂಸ್ಕಾರ ಮುಖ್ಯ, ವಿದ್ಯೆಗೆ ಕರಾವಳಿಯಲ್ಲಿ ಅತಿ ಪ್ರಾಮುಖ್ಯತೆಯಿದೆ. ಕರಾವಳಿ ಕರ್ನಾಟಕದಲ್ಲಿ ಜಿಎಸ್ ಬಿ ಸಮಾಜ ಶೈಕ್ಷಣಿಕವಾಗಿ ಮುಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ರಾಜಕೀಯದ ಕಡೆಗೆ
ಗಮನ ನೀಡದೆ ವಿದ್ಯಾರ್ಜನೆಗೆ ಗಮನ ನೀಡಬೇಕಾಗಿದೆ.

ನಮ್ಮಲ್ಲಿ ತುಂಬಾ ಯುವ ಜನಾಂಗವಿದೆ ಇವರು ಸಮಾಜವನ್ನು ಮುನ್ನಡೆಸಬೇಕಾಗಿದೆ ಎಂದರು. ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈವೆಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕರಾದ ಪಿ ರವೀಂದ್ರ ದಯಾನಂದ
ಪೈಯವರು ತಮ್ಮ ದಿಕ್ಸೂಚಿ ಭಾಷಣದಲ್ಲಿ ಜಿಎಸ್ ಬಿ
ಸಮಾಜದೊಂದಿಗಿನ ಒಡನಾಟ ಇಂದು ಸಮಾಜ
ಗುರುತಿಸುವಂತಾಗಿದೆ. ಎಲ್ಲಾ ಕ್ಷೇತ್ರದಲ್ಲಿ ನಾವು ಇದ್ದೇವೆ. ಎಲ್ಲರಿಂದ ಗೌರವಿಸಲ್ಪಡುತ್ತಿದ್ದೇವೆ. ಜೀವನೋಪಾಯಕ್ಕಾಗಿ ನಾವು ಆಯ್ದುಕೊಂಡ ಕಾರ್ಯಗಳನ್ನು ನಿಷ್ಠೆಯಿಂದ ಮಾಡುತ್ತಿದ್ದೇವೆ. ಭಾರತದ ಆರ್ಥಿಕತೆಯಲ್ಲಿ ನಮ್ಮ ಪಾಲೂ ಇದೆ ಎಂದರು.

ಈ ಸಂದರ್ಭ ಮುಖ್ಯ ಅತಿಥಿಗಳಾಗಿ ಉಡುಪಿಯ ಅನಂತ ವೈದಿಕ ಕೇಂದ್ರದ ವೇದಮೂರ್ತಿ ಚೇಂಪಿ ರಾಮಚಂದ್ರ ಅನಂತ ಭಟ್, ಮಂಗಳೂರು ಗಣೇಶ್ ಬೀಡಿ ವರ್ಕ್ಸ್ ಪ್ರೈವೆಟ್ ಲಿಮಿಟೆಡ್ ಮೈಸೂರು ಇದರ ಪಾಲುದಾರರಾದ ಗೋವಿಂದ ಜಗನ್ನಾಥ ಶೆಣೈ, ಅಮೇರಿಕದ ವಾಷಿಂಗ್‌ಟನ್ ಡಿಸಿಯ ಇಂಡಿಯನ್ ಸಿಎ ಎಸೋಸಿಯೇಷನ್ ನ ಸ್ಥಾಪಕಾಧ್ಯಕ್ಷರು,
ಹಾಗೂ ವಿಶ್ವ ಬ್ಯಾಂಕ್ ನ ಕಾರ್ಯನಿರ್ವಾಹಕರಾಗಿರುವ ಸಿಎ
ಗೋಕುಲ್‌ದಾಸ್ ಪೈ, ಮುಂಬಯಿ ನ್ಯಾಚುರಲ್ ಐಸ್ ಕ್ರೀಂನ ಆಡಳಿತ ನಿರ್ದೇಶಕರಾದ ರಘುನಂದನ್ ಎಸ್. ಕಾಮತ್, ಮುಂಬಯಿಯ ಎಮ್.ವಿ. ಕಿಣಿ ಲಾ-ಫರ್ಮ್ ನ ಸಂಸ್ಥಾಪಕರಾದ ಖ್ಯಾತ ಸುಪ್ರೀಂ ಕೋರ್ಟ್ ನ ವಕೀಲರಾದ
ಮಣಿಪುರ ವಸಂತ ಕಿಣಿ, ಭಾರತ ಸರಕಾರದ ನ್ಯಾಶನಲ್ ಬ್ಯಾಂಕ್ ಆಫ್ ಇನ್‌ಫ್ರಾಸ್ಟಕ್ಟರ್ ಡೆವಲಪ್‌ಮೆಂಟ್ ನ ಅಧ್ಯಕ್ಷರಾದ ಪದ್ಮಭೂಷಣ ಕೆ.ವಿ ಕಾಮತ್, ಎಂ ವಿ ಕಿಣಿ, ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.)ಮುದರಂಗಡಿ ಇದರ
ವಿಶ್ವಸ್ಥರಾದ ರತ್ನಾಕರ ಕಾಮತ್, ಪಡುಬಿದ್ರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೋಕೇಸರರಾದ ಪಿ ರಾಮಚಂದ್ರ ಶೆಣೈ, ಕಾರ್ಗಿಲ್ ಹುತಾತ್ಮ ಲೆ|ಕ|ಶೌರ್ಯಚಕ್ರ ಪುರಸ್ಕೃತ ಅಜಿತ್ ವಿ ಭಂಡಾರ್ಕಾರ್ ರವರ ಧರ್ಮಪತ್ನಿ ಶಕುಂತಲಾ ಎ. ಭಂಡಾರ್ಕಾರ್, ಕಾಪು ಶ್ರೀ ವೆಂಕಟರಮಣ
ದೇವಸ್ಥಾನ ಹಾಗೂ ಮಾರಿಗುಡಿಯ ಆಡಳಿತ
ಮೊತ್ತೇಸರರಾದ ಶ್ರೀ ಪ್ರಸಾದ ಶೆಣೈ, ರಾಯಚೂರಿನ
ಹೆಸರಾಂತ ಲೆಕ್ಕ ಪರಿಶೋಧಕರಾದ ಉಪ್ಪುಂದ ರಾಮಚಂದ್ರ ಪ್ರಭು, ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ಸಂಚಾಲಕರಾದ ಆರ್. ವಿವೇಕಾನಂದ ಶೆಣೈ, ಅಧ್ಯಕ್ಷರಾದ ಜಿ.ಸತೀಶ್ ಹೆಗ್ಡೆ ಕೊಟ, ಸಿಎ ಎಸ್ ಎಸ್ ನಾಯಕ್,ವಿಜಯಕುಮಾರ್ ಶೆಣೈ, ಸಿಎ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಮುರಳೀದರ ಜಿ ಶೆಣೈ ಪ್ರಾರ್ಥಿಸಿ, ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಸ್ವಾಗತಿಸಿದರು. ಸಿಎ ಎಸ್ ಎಸ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!