ರಾಜ್ಯ
ಪ್ರವೀಣ್ ನೆಟ್ಟಾರು ಕೊಲೆಗೆ ಸಂಬಂಧಿಸಿ ದ.ಕ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್

ಪುತ್ತೂರು: ಬಿಜೆಪಿ ಯುವ ಮೋರ್ಚಾ ಹಾಗೂ ಹಿಂದೂ ಸಂಘಟನೆಗಳ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.27ರ ಬುಧವಾರ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಪ್ರವೀಣ್ ನೆಟ್ಟಾರು ಅವರ ಮೃತದೇಹವನ್ನು ಅಂತ್ಯಸಂಸ್ಕಾರಕ್ಕೆ ಕೊಂಡೊಯ್ಯಲು ಬೃಹತ್ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲು ಹಿಂದೂ ಸಂಘಟನೆಗಳು ನಿರ್ಧರಿಸಿವೆ. ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಕಡಬ ತಾಲೂಕಿನಾದ್ಯಂತ ಬಂದ್ ನಡೆಸಲಾಗಿದ್ದು, ಶಾಲಾ ಕಾಲೇಜುಗಳು ಬಂದ್ ಆಗಿವೆ. ವ್ಯಾಪಾರಿಗಳು ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿದ್ದಾರೆ.