ಕರಾವಳಿ
ಪುತ್ತೂರು ತಾಲೂಕಿನಾದ್ಯಂತ ಮದ್ಯ ಮಾರಾಟ ಬಂದ್

ಪುತ್ತೂರು (ದಕ್ಷಿಣ ಕನ್ನಡ): ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದು, ಮದ್ಯ ಮಾರಾಟ ಬಂದ್ ಮಾಡಲಾಗಿದೆ.
ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಜು.28 ಮತ್ತು ಜು.29 ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಕಡಬ, ಬಂಟ್ವಾಳ ತಾಲೂಕಿನಾದ್ಯಂತ ಎಲ್ಲಾ ಬಾರ್ ಮತ್ತು ವೈನ್ ಶಾಪ್ಗಳನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.