ಕರಾವಳಿ
ಅಹಿತಕರ ಘಟನೆ ನಡೆಯದಂತೆ ಉಡುಪಿಯಲ್ಲಿ ಪೋಲಿಸ್ ಬಂದೋಬಸ್ತ್ ; ವಾಹನಗಳ ತಪಾಸಣೆ
ಉಡುಪಿ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಮತ್ತು ಸುರತ್ಕಲ್ ಫಾಝಿಲ್ ಹತ್ಯೆಯ ಬಳಿಕ ಮುಂಜಾಗ್ರತಾ ಕ್ರಮವಾಗಿ ಅಹಿತಕರ ಘಟನೆ ನಡೆಯದಂತೆ
ಉಡುಪಿಯಲ್ಲೂ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ.
ಉಡುಪಿಯ ರಾಷ್ಟ್ರೀಯ ಹೆದ್ದಾರಿ ೬೬ ಸೇರಿದಂತೆ
ಜಿಲ್ಲೆಯಾದ್ಯಂತ ಸುಮಾರು ೧೧ ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಮಾಡಿರುವ ಜಿಲ್ಲಾ ಪೋಲಿಸರು ಹೊರ ರಾಜ್ಯ, ಹೊರ ಜಿಲ್ಲೆಯ ನೋಂದಣಿ ಹೊಂದಿರುವ ಸಂಶಯಾಸ್ಪದ ವಾಹನಗಳನ್ನು ತಪಾಸಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಉದ್ಯಾವರದ ಬಲಾಯಿಪಾದೆ,
ಅಂಬಾಗಿಲು, ನೇಜಾರು ಭಾಗಗಳಲ್ಲಿ ಪೋಲಿಸರಿಂದ ಬಿಗಿ ತಪಾಸಣೆ ಮಾಡಲಾಗಿದೆ.