ಸಿ.ಇ.ಟಿ ಫಲಿತಾಂಶ : ಕಾರ್ಕಳ ಕ್ರಿಯೇಟಿವ್ ಪಿ ಯು ಕಾಲೇಜು ಪ್ರಥಮ ವರ್ಷದಲ್ಲಿಯೇ ಅಮೋಘ ಸಾಧನೆ
ಕಾರ್ಕಳ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆಗಳಿಸಿದ್ದಾರೆ.
ರಾಜ್ಯದ ಕೃಷಿ ವಿಶ್ವ ವಿದ್ಯಾನಿಲಯಗಳಿಗೆ ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿ ಉಪಾಸನ ಬಿ ಪಿ ರಾಜ್ಯಕ್ಕೆ 42 ನೇ ರ‍್ಯಾಂಕ್ ಹಾಗೂ ಪಶುವೈದ್ಯಕೀಯ ಪ್ರಾಯೋಗಿಕ ಪರೀಕ್ಷೆಯಲ್ಲಿ 103 ನೇ ರ‍್ಯಾಂಕ್ ಗಳಿಸಿರುತ್ತಾರೆ .
ಮಧುಶ್ರೀ ವಿ ಕೃಷಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 72 ನೇ ರ‍್ಯಾಂಕ್, ಪಶುವೃದ್ಯಕೀಯ ಪ್ರಾಯೋಗಿಕದಲ್ಲಿ 126 ನೇ ರ‍್ಯಾಂಕ್. ಕಾಲೇಜಿನ ರಾಘವೇಂದ್ರ ತಾಳಿಕೋಟಿ ಪಶುವೈದ್ಯಕೀಯದಲ್ಲಿ ರಾಜ್ಯಕ್ಕೆ 110 ನೇ ರ‍್ಯಾಂಕ್, ಬಿ-ಫಾರ್ಮಾ ದಲ್ಲಿ 150 ನೇ ರ‍್ಯಾಂಕ್ , ಬಿ.ಎನ್.ವೈ.ಎಸ್ ವಿಭಾಗದಲ್ಲಿ 165 ನೇ ರ‍್ಯಾಂಕ್, ಕೃಷಿ ವಿಜ್ಞಾನದಲ್ಲಿ 186 ನೇ ರ‍್ಯಾಂಕ್ ಹಾಗೂ ಇಂಜಿನಿಯರಿಂಗ್ ನಲ್ಲಿ 636 ನೇ ರ‍್ಯಾಂಕ್ ಪಡೆದಿರುತ್ತಾರೆ.
ಸಾತ್ವಿಕ್ ಶ್ರೀಕಾಂತ ಹೆಗಡೆ ಬಿ.ಎನ್.ವೈ.ಎಸ್ ನಲ್ಲಿ 116 ರ‍್ಯಾಂಕ್, ಪಶುವೈದ್ಯಕೀಯದಲ್ಲಿ 222 ನೇ ರ‍್ಯಾಂಕ್, ಬಿ.ಫಾರ್ಮಾ ದಲ್ಲಿ 383 ನೇ ರ‍್ಯಾಂಕ್ ಪಡೆದಿರುತ್ತಾರೆ.
ಕುಮಾರಿ ಸಿಂಚನ ಕೆ ಎಸ್, ಬಿ.ಎನ್.ವೈ.ಎಸ್ ವಿಭಾಗದಲ್ಲಿ 745 ನೇ ರ‍್ಯಾಂಕ್, ಕೃಷಿ ವಿಜ್ಞಾನದಲ್ಲಿ 835 ನೇ ರ‍್ಯಾಂಕ್, ಅಗಸ್ತ್ಯ ಸಮ್ಯಕ್ ಜ್ಞಾನ್ ಕೃಷಿ ವಿಜ್ಞಾನದಲ್ಲಿ 679 ನೇ ರ‍್ಯಾಂಕ್, ಬಿ.ಎನ್.ವೈ.ಎಸ್ ವಿಭಾಗದಲ್ಲಿ 924 ನೇ ರ‍್ಯಾಂಕ್ ಹಾಗೂ ಅನ್ವಿನ್ ಬಿ ಪಿ ಇಂಜಿನಿಯರಿಂಗ್ ವಿಭಾಗದಲ್ಲಿ 681 ನೇ ರ‍್ಯಾಂಕ್ ಪಡೆದಿರುತ್ತಾರೆ.
ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕ್ರಿಯೇಟಿವ್ ನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ರಾಜ್ಯ ಮಟ್ಟದ 1 ರಿಂದ 1000 ರ‍್ಯಾಂಕ್ ನ ಒಳಗೆ 31 ವಿದ್ಯಾರ್ಥಿಗಳು, 2000 ದ ಒಳಗೆ 66 ವಿದ್ಯಾರ್ಥಿಗಳು ರ‍್ಯಾಂಕ್ ನ್ನು ಗಳಿಸಿರುತ್ತಾರೆ.
ತನ್ನ ಪ್ರಥಮ ವರ್ಷದ ಸಿ.ಇ.ಟಿ ಫಲಿತಾಂಶದಲ್ಲಿಯೇ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಈ ಅಮೋಘ ಸಾಧನೆ ದಾಖಲಿಸಿದೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲೂ 100 ಶೇಕಡಾ ಫಲಿತಾಂಶ ದಾಖಲಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಿ.ಇ.ಟಿ ಸಂಯೋಜಕರಾದ ಶ್ರೀ ಸುಜಯ್ ಬಿ ಟಿ, ಕಾಲೇಜಿನ ಆಡಳಿತ ಮಂಡಳಿ ಹಾಗೂ ಉಪನ್ಯಾಸಕ ವೃಂದದವರು ಅಭಿನಂದನೆ ಸಲ್ಲಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.