ಕರಾವಳಿ

ಬೀಚ್‌ಗೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ..!

ಮಂಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ,ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುನಾಝ್ ಅಹಮ್ಮದ್(30) ಬಂಧಿತ ಆರೋಪಿ.

ಘಟನೆ ಹಿನ್ನೆಲೆ: ಜು.27 ರಂದು‌ ಎನ್ ಐಟಿಕೆ ಬೀಚ್ ಗೆ ವಿದ್ಯಾರ್ಥಿನಿಯೊಬ್ಬಳು ತನ್ನ ಸಹಪಾಠಿಯೊಂದಿಗೆ ಬಂದಿದ್ದಳು. ಈ ವೇಳೆ ಮುನಾಝ್ ಅಹಮ್ಮದ್ ವಿದ್ಯಾರ್ಥಿನಿಯ ಸಹಪಾಠಿಯನ್ನು ಹೆದರಿಸಿ ಓಡಿಸಿದ ಮೇಲೆ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಕೃತ್ಯದ ವೀಡಿಯೋ ಮಾಡಿಕೊಂಡಿದ್ದ ಆರೋಪಿ ಬಳಿಕ ಅದನ್ನು ತೋರಿಸಿ ಕಿರುಕುಳ ನೀಡುತ್ತಿದ್ದ.

ಈ ಬಗ್ಗೆ ವಿದ್ಯಾರ್ಥಿನಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಳು. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
error: Content is protected !!