ಕರಾವಳಿ
ಕೆಲವೇ ತಾಸುಗಳಲ್ಲಿ ಎಡಿಜಿಪಿ ಆದೇಶ ವಾಪಸ್: ದ್ವಿಚಕ್ರ ವಾಹನ ಹಿಂಬದಿ ಸವಾರಿಗೆ ನೋ ಪ್ರಾಬ್ಲೆಂ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ವಿಧಿಸಲಾದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧವನ್ನು ಇದೀಗ ವಾಪಸ್ ಪಡೆಯಲಾಗಿದೆ.
ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ ವಿಧಿಸಿ ಎಡಿಜಿಪಿ ಅಲೋಕ್ ಕುಮಾರ್ ಕೆಲವು ತಾಸುಗಳ ಹಿಂದೆ ಆದೇಶ ಹೊರಡಿಸಿದ್ದರು.
ಜಿಲ್ಲೆಯಲ್ಲಿ ಹೊಸ ನಿಯಮ ಜಾರಿಯಾಗಲಿದ್ದು ಕೆಲವು ಬಾರಿ ಹಿಂಬದಿ ಸವಾರರಿಂದ ತೊಂದರೆ ಉಂಟಾಗುವ ಸಾಧ್ಯತೆ ಇರುವ ಕಾರಣಕ್ಕೆ 1 ವಾರ ನಿಯಮ ಅನುಷ್ಠಾನವಾಗಲಿದೆ ಎಂದು ಅಲೋಕ್ ಕುಮಾರ್ ಹೇಳಿದ್ದರು. ಇದರಲ್ಲಿ 18 ವರ್ಷದೊಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ರಿಯಾಯಿತಿ ನೀಡಲಾಗಿತ್ತು.ಆದರೆ ಇದೀಗ ಒಟ್ಟಾರೆ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿದು ಬಂದಿದೆ.