ರಾಷ್ಟ್ರೀಯ
ಇಂದಿನ ಕೊರೋನಾ ಪ್ರಕರಣ ವಿವರ

ನವದೆಹಲಿ: ದೇಶದಲ್ಲಿ ಕೊರೋನಾ ವ್ಯಾಪಕವಾಗಿ
ಹರಡುತ್ತಿದೆ. ಕೊರೋನಾ ಸೋಂಕಿನ ಪ್ರಮಾಣದಲ್ಲಿ
ಹೆಚ್ಚಳವಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 20,551 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ.
ಇದೇ ಅವಧಿಯಲ್ಲಿ ಕೊರೋನಾ ಸೋಂಕಿತರಾಗಿದ್ದ 21, 595 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 1,35,364 ಆಗಿದೆ.
ದೇಶದ ಪ್ರತಿದಿನದ ಕೊರೋನಾ ಪಾಸಿಟಿವಿಟಿ ದರ ಶೇಕಡ 5ನ್ನುಮೀರಿದೆ.ನಿತ್ಯದ ಪಾಸಿಟಿವಿಟಿ ದರ ಶೇಕಡ 5.14ಕ್ಕೆ ತಲುಪಿದೆ.