ಸಂಪುಟ ವಿಸ್ತರಣೆಯ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ : ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ನಾಯಕತ್ವ ಬದಲಾವಣೆಯೋ ಇವೆಲ್ಲಾ ನಿಮ್ಮ ಪಕ್ಷದ ಹಣೆಬರಹ ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಂಪುಟ ವಿಸ್ತರಣೆಯೋ, ಪುನಾರಚನೆಯೋ, ನಾಯಕತ್ವ ಬದಲಾವಣೆಯೋ ಇವೆಲ್ಲಾ ನಿಮ್ಮ ಪಕ್ಷದ ಹಣೆಬರಹ ಈ ಸರ್ಕಸ್ ನಲ್ಲಿ ರಾಜ್ಯದ ಆಡಳಿತ ದಿಕ್ಕೆಟ್ಟು ಹೋಗಿದೆ. ಶೀಘ್ರವಾಗಿ ಏನಾದರೂ ನಿರ್ಧಾರ ಕೈಗೊಂಡು ಈಗಿನ ಬಿಕ್ಕಟ್ಟು ಕೊನೆಗೊಳಿಸಿ, ಆಡಳಿತದ ಕಡೆ ಗಮನಕೊಟ್ಟು ರಾಜ್ಯವನ್ನು ಉಳಿಸಿ ಎಂದು ಟ್ವೀಟ್ ಮಾಡಿದ್ದಾರೆ.
ಹಿಂದೆಲ್ಲ ಬಿಜೆಪಿ ನಾಯಕರು, ‘ಹೈಕಮಾಂಡ್ ಸಂಸ್ಕೃತಿ’ ಮೂಲನಿವಾಸಿಗಳು-ವಲಸೆಗಾರರು’ ‘ಕುಟುಂಬ ರಾಜಕಾರಣ’ ಎಂಬೀತ್ಯಾದಿ ಪದಗಳನ್ನು ಜೋಡಿಸಿ ಹಗಲು ರಾತ್ರಿ ನಮ್ಮ ವಿರುದ್ಧ ಟೀಕೆ ಮಾಡುತ್ತಿದ್ದರು. ಈಗ ಅದೇ ಆರೋಪಗಳನ್ನು ಪರಸ್ಪರ ಮಾಡ್ಕೊಂಡು ಬತ್ತಲಾಗುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.