ವಿಶೇಷ ಲೇಖನಗಳು

ಆ. 11- ಮಣಿಪಾಲದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಶ್ರೀ ಸಾಯಿ ಎಂಟರ್ ಪ್ರೈಸಸ್ ಪ್ರೈ.ಲಿ., ಭಂಡಾರಿ ಪವರ್ ಲೈನ್ಸ್ ಪ್ರೈ.ಲಿ., ಆಕ್ಸಿಸ್ ಬ್ಯಾಂಕ್, ಬಿ.ಎಸ್.ಎಲ್ ಇಂಡಿಯಾನ್ ಪ್ರೈ. ಲಿ ಮತ್ತು ರಿಲಯನ್ಸ್ ಜಿಯೋ ಪೈ.ಲಿ ಕಂಪನಿಗಳ ವತಿಯಿಂದ ಆಗಸ್ಟ್ 11 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ
ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಗ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ಮೊ.ನಂ: 8105618291, 8197440155, 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!