ರಾಜ್ಯ
ಬಿಜೆಪಿ ಯುವ ನಾಯಕನ ಹತ್ಯೆ.!

ಸುಳ್ಯ : ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದ್ಯಸ್ಯ ಯುವ ನಾಯಕ ಹಾಗೂ ಚಿಕನ್ ಅಂಗಡಿ ಮಾಲೀಕನ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಘಟನೆ ಮಂಗಳವಾರ ನಡೆದಿದೆ.
ಹಲ್ಲೆಗೊಳಾಗದವರು ಪ್ರವೀಣ್ ನೆಟ್ಟಾರ್ ಎಂದು ತಿಳಿಯಲಾಗಿದೆ.ಇವರು ರಾಜಕೀಯ ಕ್ಷೇತ್ರದಲ್ಲಿ ಬೆಳೆಯುತ್ತಿದ್ದರು.ಯಾರೋ ವೈಯಕ್ತಿಕ ದ್ವೇಷದಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿಯಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬೆಳ್ಳಾರೆ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಹತ್ಯೆ ಖಂಡಿಸಿದ ಸಿಎಂ:
ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥಹ ಹೇಯ ಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ಟ್ವಿಟ್ ಮಾಡಿದ್ದಾರೆ.