
ಮಣಿಪಾಲ ಹೋಟೆಲ್ ಕಂಟ್ರಿ ಇನ್ ಅಂಡ್ ಸೂಟ್ಸ್ ನಲ್ಲಿ ಇಂದು ದಿನಾಂಕ 30-07-2021 ರಂದು ನಡೆದ ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಇದರ “ವಿಶೇಷ ಕಾರ್ಯಕಾರಣಿ” ಸಭೆಯಲ್ಲಿ ಶಾಸಕರಾದ ಶ್ರೀ ಕೆ ರಘುಪತಿ ಭಟ್ ರವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಪಾಧ್ಯಕ್ಷರಾದ ಯಶ್ಪಾಲ್ ಸುವರ್ಣ, ಶ್ರೀಷ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ರಾಜ್ಯ ಬಿಜೆಪಿ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯದರ್ಶಿಗಳಾದ ಸಲೀಂ ಅಂಬಾಗಿಲು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್ ಹಾಗೂ ಪಕ್ಷದ ಹಿರಿಯರು ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.