ಕಮಲ ಸಂಘಮ 2022 ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿ, ಉಡುಪಿ ನಗರ, ಮಹಾಶಕ್ತಿ ಕೇಂದ್ರ ಕರಂಬಳ್ಳಿ ಹಾಗೂ ಬಿಜೆಪಿ ಯುವ ಮೋರ್ಚಾ ಉಡುಪಿ ನಗರ ಇದರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 14-08-2022 ರಂದು ಕರಂಬಳ್ಳಿ ಬೈಲಿನಲ್ಲಿ ಆಯೋಜಿಸಲಾದ “ಕಮಲ ಸಂಘಮ 2022” -(ಕೆಸರ್ಡ್ ಒಂಜಿ ದಿನ) ಕಾರ್ಯಕ್ರಮವನ್ನು ಶಾಸಕ ಶ್ರೀ ಕೆ. ರಘುಪತಿ ಭಟ್ ರವರು ಉದ್ಘಾಟಿಸಿದರು.
ಬಳಿಕ ನಡೆದ ಕೆಸರು ಗದ್ದೆ ಸ್ಪರ್ಧೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ಸಹ ವಕ್ತಾರರಾದ ಗುರುಪ್ರಸಾದ್, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಬಿಜೆಪಿ ಕೋಶಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕರಂಬಳ್ಳಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕಿಶೋರ್ ಕರಂಬಳ್ಳಿ, ನಗರ ಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಕರಂಬಳ್ಳಿ, ಪ್ರಭಾಕರ್ ಪೂಜಾರಿ, ಭಾರತಿ ಪ್ರಶಾಂತ್, ವಿಜಯ್ ಕೊಡವೂರು, ಕೃಷರಾವ್ ಕೊಡಂಚ, ಕರಂಬಳ್ಳಿ ವೆಂಕಟರಮಣ ದೇವಸ್ಥಾನದ ಅರ್ಚಕರಾದ ದಿವಾಕರ ಐತಾಳ್, ಉಡುಪಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು. ನಗರ ಸಭಾ ಸದಸ್ಯರಾದ ಗಿರೀಶ್ ಅಂಚನ್ ಕಾರ್ಯಕ್ರಮವನ್ನು ನಿರೂಪಿಸಿದರು.