ಕರಾವಳಿ

ಉಡುಪಿಯಲ್ಲಿ ಸಂಭ್ರಮದ 75 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ, ಆಗಸ್ಟ್. 15 : ಇಂದು ಉಡುಪಿಯ ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ನಡೆದ,75 ನೇ ವರ್ಷದ ಸ್ವಾತಂತ್ರೊö್ಯÃತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ, ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಧ್ವಜಾರೋಹಣ ನೆರವೇರಿಸಿ,  ಸ್ವಾತಂತ್ರ್ಯೋತ್ಸವದ   ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಪೊಲೀಸ್,ಕರಾವಳಿ ಕಾವಲು ಪಡೆ, ಅರಣ್ಯ ಇಲಾಖೆ, ಅಗ್ನಿಶಾಮಕ ಇಲಾಖೆ, ಗೃಹರಕ್ಷಕ ದಳ, ಸೇವಾದಳ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್.ಸಿ.ಸಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ಕಾರ್ಯಕ್ರಮದಲ್ಲಿ , ಕಾಮನ್ ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತ ಗುರುರಾಜ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ 10 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆವತಿಯಿಂದ ಅರ್ಹ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ ನಡೆಯಿತು. ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಉಡುಪಿ ಶಾಸಕ ರಘುಪತಿ ಭಟ್,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟಿçಕ್ ಇಂಡಸ್ಟಿçÃಸ್ ಲಿಮಿಟೆಡ್ ನ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮನೋಹರ ಎಸ್ ಕಲ್ಮಾಡಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, , ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!