ರಾಜ್ಯ
ಶಿವಮೊಗ್ಗ : ಮೂರು ದಿನ ರಾತ್ರಿಹೊತ್ತು ಬೈಕ್ ಸಂಚಾರ ನಿಷೇಧ

ಶಿವಮೊಗ್ಗ : ಸಾವರ್ಕರ್ ಪ್ಲೆಕ್ಸ್ ತೆರವು ವಿವಾದ ಹಾಗೂ ನಗರದಲ್ಲಿ ನಿನ್ನೆ ಸಂಜೆ ನಡೆದ ಚಾಕು ಇರಿತ ಘಟನೆ ಬಳಿಕ ಶಿವಮೊಗ್ಗದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದೆ. ಈ ಸಂಬಂಧ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ರಾತ್ರಿ ಹೊತ್ತು ಬೈಕ್ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಅಲ್ಲದೆ, ಕಳೆದ ಕೆಲ ದಿನಗಳ ಹಿಂದೆ ಮಂಗಳೂರಿನಲ್ಲಿ ಮಾಡಿದಂತೆ ಬೈಕ್ ನಲ್ಲಿ ಇಬ್ಬರು ಯುವಕರು ಸಂಚರಿಸದಂತೆ ಸೂಚಿಸಲಾಗಿದೆ.
ಸೋಮವಾರ ರಾತ್ರಿ ಸುದ್ದಿಗೋಷ್ಠಿ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ.