ಕರಾವಳಿ

ಮೊಗವೀರಪೇಟೆ ಶ್ರೀ ದುರ್ಗಾ ಸಭಾಭವನ ಉದ್ಘಾಟನೆ

ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗವೀರ ಪೇಟೆ ದುರ್ಗಾಪರಮೇಶ್ವರಿ ದೇವಸ್ಥಾನದ “ಶ್ರೀ ದುರ್ಗಾ ಸಭಾಭವನ” ಇಂದು ದಿನಾಂಕ 31-08-2022 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಉದ್ಘಾಟಿಸಿದರು.

ಈ ಸಭಾಭವನ ನಿರ್ಮಾಣಕ್ಕೆ ಶಾಸಕ ರಘುಪತಿ ಭಟ್ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರ ಪ್ರದೇಶಾಭಿವೃದ್ಧಿ ನಿಧಿಯಿಂದ ಒಟ್ಟು ರೂ. 20.00 ಲಕ್ಷ ಮಂಜೂರುಗೊಳಿಸಲಾಗಿತ್ತು.

ಈ ಸಂದರ್ಭದಲ್ಲಿ ಕೊಕ್ಕರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ವಸಂತ್ ಸೇರ್ವೆಗಾರ್, ರಘುವೀರ್ ಕಿಣಿ, ಸುನಿಲ್ ಹಾಗೂ ಮೊಗವೀರ ಪೇಟೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!