24×7 ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ಸಹಕರಿಸಿ – ಜಲ್ ಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ರಘುಪತಿ ಭಟ್ ಪಂಚಾಯತ್ ಅಧ್ಯಕ್ಷರುಗಳಿಗೆ ಕರೆ

ಉಡುಪಿ ನಗರಸಭೆಗೆ ಅಮೃತ್ ಯೋಜನೆಯಡಿ ವಾರಾಹಿಯಿಂದ ಕುಡಿಯುವ ನೀರು ಸೌಲಭ್ಯ ಕಲ್ಪಿಸುವ ಪೈಪ್‌ಲೈನ್ ಹಾದು ಹೋಗುವ ದಾರಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಿಗೆ 2021-22ನೇ ಸಾಲಿನಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಸೌಲಭ್ಯ.
ಕಲ್ಪಿಸುವ ಯೋಜನೆಯ ಡಿಪಿಎಆರ್ ತಯಾರಿಸುವ ಸಂಬಂಧ ಇಂದು ದಿನಾಂಕ 17-07-2021 ರಂದು ಜಿಲ್ಲಾ ಪಂಚಾಯತ್ ಡಾll. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಮಾತನಾಡಿ ವಿಶೇಷವಾದ ಪ್ರಯತ್ನದಿಂದ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗಿದೆ.
ಇದನ್ನು ಕಾರ್ಯರೂಪಕ್ಕೆ ತರಲು ಆಯಾ ಪಂಚಾಯತ್ ನ ಅಧ್ಯಕ್ಷರುಗಳು ಎಲ್ಲಾ ಸದಸ್ಯರುಗಳನ್ನು ಒಗ್ಗೂಡಿಸಿಕೊಂಡು ತಮ್ಮ ಭಾಗದ ಪಂಚಾಯತ್ ಗಳ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಬಗ್ಗೆ ಮಾಹಿತಿಯನ್ನು ಒದಗಿಸಬೇಕು. ಆಗಸ್ಟ್ ತಿಂಗಳ ಒಳಗೆ ಡಿಪಿಎಆರ್ ಸಿದ್ಧಪಡಿಸಿ ತಕ್ಷಣದಲ್ಲಿ ಕಾಮಗಾರಿಗಳನ್ನು ನಿರ್ವಹಿಸಿ ಗ್ರಾಮೀಣ ಭಾಗಗಳ ಜನತೆಗೆ 24*7 ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲು ಸಹಕರಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಕೆ.ಆರ್.ಐ.ಡಿ.ಎಲ್ ಕಾರ್ಯಪಾಲಕ ಅಭಿಯಂತರರಾದ ಹೆಬಸೂರ್, ಕೆ.ಯು.ಐ.ಡಿ.ಎಫ್ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಉಮಾಶಂಕರ್ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.