ಎಬಿವಿಪಿಯಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

ಮಣಿಪಾಲ: ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿಯನ್ನು ಮುತ್ತಿಗೆ ಹಾಕುವ ಮೂಲಕ ಪ್ರತಿಭಟಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಬಿವಿಪಿ ಮಂಗಳೂರು ವಿಭಾಗ ಸಹ ಸಂಚಾಲಕ ಸುಮುಖ ಭಟ್ ,
NEP ಜಾರಿಯಾದ ನಂತರ ಎಲ್ಲಾ ವಿಶ್ವವಿದ್ಯಾನಿಲಯಗಳು UUCMS ತಂತ್ರಾಂಶವನ್ನು ಬಳಸಿ ಮಾಹಿತಿಗಳನ್ನು ಇದರ ಮೂಲಕವೇ ನಮೂದಿಸಬೇಕಾಗಿದೆ ಆದರೆ ತಂತ್ರಾಂಶದಲ್ಲಿರುವ ಕೆಲವು ಸಮಸ್ಯೆಗಳಿಂದಾಗಿ ಫಲಿತಾಂಶ ಪ್ರಕಟಗೊಂಡಿಲ್ಲ ಇದರಿಂದಾಗಿ ,ಹಾಸ್ಟೆಲ್ ಗೆ ಅರ್ಜಿ ಸಲ್ಲಿಸಲು, ಬೇರೆ ಕಾಲೇಜಿಗೆ ವರ್ಗಾವಣೆಗೊಳ್ಳಲು ವಿದ್ಯಾರ್ಥಿಗಳು ಸಮಸ್ಯೆ ಎದುರಿಸುವಂತಾಗಿದ್ದು ,ಸರ್ಕಾರ ಈ ಕೂಡಲೇ ತಂತ್ರಾಂಶವನ್ನು ಸರಿಪಡಿ ಸಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು.
ಲಕ್ಷಾಂತರ ಬಡ ವಿದ್ಯಾರ್ಥಿಗಳು ಪ್ರತಿ ವರ್ಷ ದೊರೆಯುವ ವಿದ್ಯಾರ್ಥಿ ವೇತನವನ್ನು ಅವಲಂಬಿಸಿಕೊಂಡಿದ್ದು ಈ ಬಾರಿ ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ದೊರೆತಿಲ್ಲ. ಈ ಕೂಡಲೇ ಸರ್ಕಾರ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕೆಂದು ನಗರ ಸಹ ಕಾರ್ಯದರ್ಶಿ ಶ್ರೀಹರಿ ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ವೀಣಾ ಅವರು ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಜಯ್ ಪ್ರಭು,ಪ್ರಮುಖ ಕಾರ್ಯಕರ್ತರಾದ ,ಆಶಿಶ್ ಶೆಟ್ಟಿ, ಗಣೇಶ್, ನಿರಂಜನ್,ಗಿರಿಧರ್, ಪ್ರಜ್ವಲ್,ಶ್ರೀವತ್ಸ, ಕಿಶೋರ್ ಕುಮಾರ್ ಮಾರ್ಪಳ್ಳಿ ವಿದ್ಯಾರ್ಥಿನಿಯರಾದ ವಿನೋದಾ,ಶಾರ್ವರಿ ಸೇರಿದಂತೆ ಬೃಹತ್ ಸಂಖ್ಯೆಯಲ್ಲಿ ವಿದ್ಯರ್ಥಿಗಳು ಪಾಲ್ಗೊಂಡಿದ್ದರು.