ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ – ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಉಡುಪಿ: ಆದರ್ಶ ಆಸ್ಪತ್ರೆ ಉಡುಪಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಡಾl ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜನ್ಮಜಯಂತಿ ಹಾಗೂ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಅಂಗವಾಗಿ ಇಂದು ದಿನಾಂಕ 04-09-2022 ರಂದು ಆದರ್ಶ ಆಸ್ಪತ್ರೆಯಲ್ಲಿ ಆಯೋಜಿಸಲಾದ “ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಹಾಗೂ ಶಿಕ್ಷಕರು ಮತ್ತು ಅವರ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಾಹೆ ಮಣಿಪಾಲದ ಅಂತರಾಷ್ಟ್ರೀಯ ಸಹಯೋಗದ ನಿರ್ದೇಶಕರಾದ ಕರುಣಾಕರ್ ಕೋಟೆಗಾರ್, ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ. ಎಸ್ ಚಂದ್ರಶೇಖರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ವಿಮಲ, ಶಿಕ್ಷಕರಾದ ಅಶೋಕ್ ಕಾಮತ್, ಶ್ರೀಕಾಂತ್ ಸಿದ್ಧಾಪುರ ಉಪಸ್ಥಿತರಿದ್ದರು.