ಅಂತಾರಾಷ್ಟ್ರೀಯ
ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ

ಜಪಾನ್: ಜಪಾನ್ ನ ಮಾಜಿ ಪ್ರಧಾನಿ ಶಿಂಜೊ ಅಬೆ
ಅವರ ಮೇಲೆ ನಾರಾ ನಗರದಲ್ಲಿ ಭಾಷಣ ಮಾಡುವಾಗಲೇ ಗುಂಡಿಕ್ಕಿರುವ ಘಟನೆ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಭಾಷಣ ಮಾಡುವಾಗ ಮಾಜಿ ಪ್ರಧಾನಿ ಶಿಂಜೊ ಅಬೆ
ಅವರನ್ನು ನಾರಾ ನಗರದಲ್ಲಿ ಗುಂಡಿಕ್ಕಲಾಗಿದೆ, ಸದ್ಯ
ಶಂಕಿತ ಹಂತಕರನ್ನು ವಶಕ್ಕೆ ಪಡೆಯಲಾಗಿದೆ ಎಂದು
ಜಪಾನ್ ನ ಸುದ್ದಿ ಸಂಸ್ಥೆ ವರದಿ ಮಾಡಿದೆ.
ತೀವ್ರ ರಕ್ತಸ್ರಾವದಿಂದ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅವರ ಸ್ಥಿತಿ
ಚಿಂತಾಜನಕವಾಗಿದೆ ಎಂದು ಮಾಧ್ಯಮಗಳು ವರದಿ
ಮಾಡಿವೆ.