ಲಾರಿ ಢಿಕ್ಕಿ : ವ್ಯಕ್ತಿ ಸ್ಥಳದಲ್ಲೇ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪ ರಸ್ತೆಯ ಪಕ್ಕ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ಇಲ್ಲಿನ ಕಲ್ಲಾಪು ಮಾರುಕಟ್ಟೆಯ ಬಳಿ ಸಂಭವಿಸಿದೆ.
ಸಾವನ್ನಪ್ಪಿದ ವ್ಯಕ್ತಿ ಬೆಂಗ್ರೆ ನಿವಾಸಿ ಪ್ರಸ್ತುತ ಕಲ್ಲಾಪುವಿನಲ್ಲಿ ನೆಲೆಸಿರುವ ಬೆಂಗರೆ ನಿಯಾಝ್ ಬಾವಾ ( 40) ಎಂದು ತಿಳಿದು ಬಂದಿದೆ.
ಇವರು ಕಲ್ಲಾಪು ಮಾರುಕಟ್ಟೆಯಲ್ಲಿ ಕೆಎಂ ಫಾರೂಕ್ ಎಂಬವರ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಬೆಳಗ್ಗಿನ ಜಾವ 4.10ರ ಸುಮಾರಿಗೆ ಮನೆಯಿಂದ ನಡೆದುಕೊಂಡು ಹೋಗುತ್ತಿದ್ದ ವೇಳೆ ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಲಾರಿಯೊಂದು ವೇಗವಾಗಿ ಬಂದು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಪರಿಣಾಮ ಲಾರಿಯ ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ, ಈ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರಿಂದ ತಿಳಿದು ಬಂದಿದೆ
ಅಪಘಾತದ ಬಳಿಕ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಕ್ಲೀನರ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸರು ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.