ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟನೆ

ಶ್ರೀ ಮಲ್ಲಿಕಾರ್ಜುನ ಗೆಳೆಯರ ಬಳಗ, ಒಳಬೈಲು ಶ್ರೀ ಮಲ್ಲಿಕಾರ್ಜುನ ಆರಾಧನಾ ಸಮಿತಿ, ಒಳಬೈಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಕೊಕ್ಕರ್ಣೆ ವಲಯ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಜಿಲ್ಲಾಡಳಿತ ಉಡುಪಿ ಜಿಲ್ಲೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಇಂದು ದಿನಾಂಕ 04-09-2022 ರಂದು ಕೊಕ್ಕರ್ಣೆ ಒಳಬೈಲಿನಲ್ಲಿ ಆಯೋಜಿಸಲಾದ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ” ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಉದ್ಘಾಟಿಸಿ ರಕ್ತ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪ್ರತಾಪ್ ಹೆಗ್ಡೆ ಮಾರಾಳಿ, ಕೊಕ್ಕರ್ಣೆ ಗ್ರಾಮ ಪಂಚಾಯತ್ ಸದಸ್ಯರಾದ ವಸಂತ್ ಸೇರ್ವೆಗಾರ್, ಪ್ರಸನ್ನ ಶೆಟ್ಟಿ, ಸುನಿಲ್, ವಸಂತ್ ಕುಮಾರ್, ರೇಖಾ, ರಘುವೀರ್ ಕಿಣಿ, ಶ್ರೀ ಮಲ್ಲಿಕಾರ್ಜುನ ಗೆಳೆಯರ ಬಳಗದ ಅಧ್ಯಕ್ಷರಾದ ವಿಕ್ರಮ್ ನಾಯ್ಕ್, ಗುರಿಕಾರರಾದ ಸಾಂತ ನಾಯ್ಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.