ರಾಷ್ಟ್ರೀಯ

ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಲಿಫ್ಟ್ ದುರಂತ: ಏಳು ಕಾರ್ಮಿಕರ ಸಾವು

ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿ ಭೀಕರ ದುರಂತ ಸಂಭವಿಸಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಲಿಫ್ಟ್ ಅಪ್ಪಳಿಸಿದ ಪರಿಣಾಮ ಏಳು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ.

ಬಹು ಮಹಡಿ ಕಟ್ಟಡದಲ್ಲಿ ಲಿಫ್ಟ್ ಅಳವಡಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಎಂಟು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಈ ದುರಂತ ನಡೆದಿದೆ.

ತಕ್ಷಣ ಸ್ಥಳಕ್ಕೆ ಧಾವಿಸಿ ಬಂದ ಅಗ್ನಿಶಾಮಕ ದಳ ರಕ್ಷಣಾ
ಕಾರ್ಯಾಚರಣೆ ನಡೆಸಿತ್ತು. ಆದರೂ ಕಾರ್ಮಿಕರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಪೊಲೀಸರು ಈ ಸಂಬಂದ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
error: Content is protected !!