ಪ್ರಧಾನಿ ನರೇಂದ್ರ ಮೋದಿಜೀ 72ನೇ ಜನ್ಮದಿನ – ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟನೆ

ಉಡುಪಿ :ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ 72ನೇ ಜನ್ಮದಿನದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಉಡುಪಿ ನಗರ, ಬಿಜೆಪಿ ಯುವ ಮೋರ್ಚಾ ಉಡುಪಿ ನಗರ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ರಕ್ತ ನಿಧಿ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಇಂದು ದಿನಾಂಕ 17-09-2022 ರಂದು ಆಯೋಜಿಸಲಾದ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ಶಾಸಕ ಶ್ರೀ ಕೆ. ರಘುಪತಿ ಭಟ್ ಅವರು ಉದ್ಘಾಟಿಸಿ ಕಾರ್ಯಕ್ರಮದ ಆಯೋಜಕರಿಗೆ ಹಾಗೂ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುತ್ತಿರುವ ರಕ್ತದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರೋಷನ್ ಶೆಟ್ಟಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಸತೀಶ್ ಸಾಲ್ಯಾನ್, ಕೆ.ಎಂ.ಸಿ ರಕ್ತ ನಿಧಿ ವಿಭಾಗ ಡಾll. ಶಮಿ ಶಾಸ್ತ್ರಿ ಹಾಗೂ ನಗರ ಯುವ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.